Accident

ಧಾರವಾಡದ ಹಾರೋಬೆಳವಡಿ ಬಳಿ ಭೀಕರ ಅಪಘಾತ, ಇಬ್ಬರು ಯುವಕರ ದಾರುಣ ಸಾವು!

Share

ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರಬೇಕಿದ್ದ ಇಬ್ಬರು ಯುವಕರನ್ನು ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆಯುವ ಮೂಲಕ ಜವರಾಯ ಬಲಿ ಪಡೆದಿದ್ದಾನೆ. ಇದರಿಂದ ಕುಟುಂಬಸ್ಥರ ಕಣ್ಣೀರು ಮುಗಿಲು ಮುಟ್ಟಿದ್ದು, ಈ ದುರಂತ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಬಳಿ ತಡರಾತ್ರಿ ನಡೆದಿದೆ.

ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ 27 ವರ್ಷದ ಸಂಗಮೇಶ ಕೇದಾರ ಜಾವೂರ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಕಿತ್ತೂರ ಬಳಿಯ ಬಸಾಪುರದ ಅವರ ಚಿಕ್ಕಮ್ಮನ ಮಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತರಿಬ್ಬರೂ ಎನ್‌ಎಸ್‌-200 (NS200) ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದು, ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಮತ್ತೋರ್ವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮನೆಯವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ಮಕ್ಕಳು, ಹೆತ್ತವರ ಕಣ್ಣೆದುರೇ ನಂದಿಹೋದ ದೀಪಗಳಾಗಿದ್ದಾರೆ. ಮನೆಗೆ ಸಂತೋಷ ತರಬೇಕಿದ್ದವರು, ಎಂದೂ ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ பரிಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags:

error: Content is protected !!