ಪುಣೆಯಿಂದ ಸವದತ್ತಿಗೆ ತೆರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕಾರಿನ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಣೆಯಿಂದ ಸವದತ್ತಿಗೆ ತೆರಳುತ್ತಿದ್ದ ಕಾರು ಹಾಗೂ ಯರಗಟ್ಟಿಯಿಂದ ಗೋಕಾಕ್ ಕಡೆಗೆ ಬರುತ್ತಿದ್ದ ಲಾರಿ ನಡುವೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಪುಣೆ ಮೂಲದ ಮಾಂಡ್ರೆ ಕುಟುಂಬದವರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
