Accident

ಧಾರವಾಡದ ಟೋಲ್ ನಾಕಾ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು; ಚಾಲಕ ಪರಾರಿ

Share

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಟೋಲ್ ನಾಕಾ ಬಳಿ ತಡರಾತ್ರಿ ಸಂಭವಿಸಿದೆ.

ತೇಜಸ್ವಿನಗರದ ವಾಮನ್ ವಿಠಲ್ (32) ಎಂಬುವವರೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಇವರಿಗೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಚಾಲಕ ತನ್ನ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಇತ್ತ ಪಾದಚಾರಿಗೆ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಮೃತ ಪಾದಚಾರಿಯ ಮೃತದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ಕಾರಿನ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಲೆ ಬೀಸಿದ್ದಾರೆ.

Tags:

error: Content is protected !!