Nippani

ಭೀಕರ ಅಗ್ನಿ ಅವಘಡ: ಸುಟ್ಟು ಕರಕಲಾದ ಟೆಂಪೋ ಟ್ರಾವೆಲರ್; ತಪ್ಪಿದ ಭಾರೀ ಅನಾಹುತ

Share

ನಿಪ್ಪಾಣಿ ತಾಲೂಕಿನ ಬೋರಗಾಂವ್ ಗ್ರಾಮದಲ್ಲಿ ಟೆಂಪೋ ಟ್ರಾವೆಲರ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಡೀ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೋರಗಾಂವ್‌ನಲ್ಲಿ ಸಂಚರಿಸುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ತೀವ್ರ ಸ್ವರೂಪ ಪಡೆದುಕೊಂಡು ಇಡೀ ವಾಹನವನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ಟೆಂಪೋ ಟ್ರಾವೆಲರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ವಾಹನದಲ್ಲಿದ್ದವರು ಸಮಯಪ್ರಜ್ಞೆ ಮೆರೆದು ಕೆಳಗಿಳಿದಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಪ್ರಾಣಾಪಾಯ ತಪ್ಪಿದಂತಾಗಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Tags:

error: Content is protected !!