Dharwad

ಧಾರವಾಡದ ನುಗ್ಗಿಕೇರಿ ಬಳಿ ಭೀಕರ ರಸ್ತೆ ಅಪಘಾತ, ಮಹಿಳೆ ಸ್ಥಳದಲ್ಲೇ ಸಾವು…..

Share

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಧಾರವಾಡದ ನುಗ್ಗಿಕೇರಿ ಬಳಿ ನಡೆದಿದೆ.

ಕಾರು ಮತ್ತು ಸ್ಕೂಟಿ ನಡುವೆ ನಡೆದ ಈ ಭೀಕರ ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು? ಮೃತ ಮಹಿಳೆಯ ಗುರುತು ಹಾಗೂ ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಸಂಬಂಧಪಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Tags:

error: Content is protected !!