Belagavi

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಪುನಶ್ಚೇತನಗೊಂಡ 988ನೇ ಕೆರೆ ಲೋಕಾರ್ಪಣೆ

Share

ಜಲ ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಯ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಪುನಶ್ಚೇತನಗೊಂಡ ರಾಜ್ಯದ 988ನೇ ಕೆರೆಯ ಬಾಗಿನ ಅರ್ಪಣೆ ಹಾಗೂ ಹಸ್ತಾಂತರ ಸಮಾರಂಭ ಅತ್ಯಂತ ಸಂಭ್ರಮದಿಂದ ನೆರವೇರಿತು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಬೆನಕನಹಳ್ಳಿ ಪಟ್ಟಣ ಪಂಚಾಯತ್, ಗ್ರಾಮದ ಪಂಚ ಕಮಿಟಿ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಪುನಃಶ್ಚೇತನಗೊಳಿಸಲಾದ 988ನೇ ಕೆರೆಯ ಬಾಗಿನ ಅರ್ಪಣೆ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಮಫಲಕವನ್ನು ಅನಾವರಣಗೊಳಿಸಲಾಯಿತು.

​ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜಲ ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ನಮ್ಮ ರೈತ ಬಾಂಧವರಿಗೆ ಹಾಗೂ ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ.

​ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಹರಿ ಗುರೂಜಿ ಮಹಾರಾಜರು, ಪಂಚ ಕಮಿಟಿ ಅಧ್ಯಕ್ಷರಾದ ಶ್ರೀ ಪ್ರಭಾಕರ ದೇಸೂರಕರ, ಯುವರಾಜಣ್ಣ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ, ಡಾ. ಜಿ.ಆರ್. ಸೋನೇರ, ಶ್ರೀ ಸತೀಶ ನಾಯ್ಕ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:

error: Content is protected !!