Chikkodi

ಬೋರವೆಲ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಖಡಕಲಾಟ ಪೊಲೀಸರು: 2.40 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ, ಇಬ್ಬರ ಬಂಧನ

Share

ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಬೋರವೆಲ್ ಕೇಬಲ್ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೈತರ ಜಮೀನುಗಳಲ್ಲಿದ್ದ ಸುಮಾರು 1,400 ಅಡಿ ಬೋರವೆಲ್ ಕೇಬಲ್ ಹಾಗೂ ಕೃಷಿ ಪಂಪ್‌ಸೆಟ್‌ಗೆ ಸಂಬಂಧಿಸಿದ ವಿವಿಧ ಉಪಕರಣಗಳನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಖಡಕಲಾಟ ಠಾಣೆಯ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಕಳ್ಳರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ ಒಟ್ಟು 2,40,000 ಮೌಲ್ಯದ ಕೇಬಲ್ ಮತ್ತು ಪಂಪ್‌ಸೆಟ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಲಾಗಿದೆ.

ಈ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ರೈತರಿಗೆ ನ್ಯಾಯ ಒದಗಿಸಿದ ಖಡಕಲಾಡ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯದಕ್ಷತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags:

error: Content is protected !!