ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಸ್ವತ್ತನ್ನು ವಂಚನೆಯಿಂದ ಮಾರಾಟ ಮಾಡಿದ್ದ ಆರೋಪದ ಮೇಲೆ, ಹುಬ್ಬಳ್ಳಿಯ ಸೆಟ್ಲಿಮೆಂಟ್ನ ರಾಘವೇಂದ್ರ ಗೋಕಾಕ್ ಎಂಬುವನನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ.
ಹೌದು, ಹುಬ್ಬಳ್ಳಿಯ ಉಣಕಲ್ ಬಳಿ ಮೂಲ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಖುಲ್ಲಾ ಸೈಟ್ ಸ್ವತ್ತನ್ನು ಅಕ್ರಮವಾಗಿ ಮಾರಾಟ ಮಾಡಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಪೊಲೀಸರು ವಂಚನೆ ಮಾಡಿದ ರಾಘವೇಂದ್ರ ಗೋಕಾಕ್ನನ್ನು ಅರೆಸ್ಟ್ ಮಾಡಿದ್ದಾರೆ. ಇವನು ಇದೇ ರೀತಿ ಸಾಕಷ್ಟು ಅಮಾಯಕರಿಗೆ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿದ್ದಾನೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ. ಖುಲ್ಲಾ ಜಾಗ ಕಂಡರೆ ಸಾಕು ಪುಡಿರೌಡಿಗಳ ಹಾರಾಟ ಹೆಚ್ಚಾಗಿದೆ. ಪೊಲೀಸರು ಇಂಥವರಿಗೆ ಪಾಠ ಕಲಿಸಬೇಕಿದೆ. ವಂಚನೆ ಮಾಡಿದ ರಾಘವೇಂದ್ರ ಗೋಕಾಕ್ನನ್ನು ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
