State

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲಾ ಪಠ್ಯಕ್ರಮದಲ್ಲಿ ಸಂವಿಧಾನದ ಪಾಠ ಅಳವಡಿಕೆ; ಸಿಎಂ ಡಿ.ಕೆ. ಶಿವಕುಮಾರ್

Share

ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾ ಕವಚ. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.

ಬೆಂಗಳೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು.“ಸಂವಿಧಾನ ಭಾರತದ ಅಂತರಾತ್ಮ. ಪ್ರಜಾಪ್ರಭುತ್ವದ ಶಕ್ತಿ. ದೇಶದ 140 ಕೋಟಿ ಜನರ ಕನಸು, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ರಾಷ್ಟ್ರೀಯ ಶಕ್ತಿ. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಅದರ ಮೌಲ್ಯಗಳನ್ನು ಪುಸ್ತಕಕ್ಕೆ ಸೀಮಿತಗೊಳಿಸದೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಪ್ರತಿಪಾದಿಸಿದರು. ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ಜವಾಹರಲಾಲ್ ನೆಹರು ಅವರ ಮಾರ್ಗದರ್ಶನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಂವಿಧಾನ ರಚನೆಯ ಮಹತ್ವದ ಜವಾಬ್ದಾರಿ ನೀಡಲಾಯಿತು. ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ, ಹಕ್ಕು ಮತ್ತು ಸಮಾನತೆಯ ಅವಕಾಶ ಕಲ್ಪಿಸಿದ ಸಂವಿಧಾನ ರಚನಾ ಮಹನೀಯರಿಗೆ ಕೋಟಿ ನಮನ ಸಲ್ಲಿಸಬೇಕು. ಸಂವಿಧಾನ ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಬಂಡಾರ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿದ ಪವಿತ್ರ ಗ್ರಂಥ” ಎಂದು ಬಣ್ಣಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೀಸಲಾತಿ ರದ್ದು ಮಾಡಿದ್ರೆ ರಕ್ತಪಾತ ಆಗುತ್ತೆ ಅನ್ನೋದು ಬಿಜೆಪಿಗೆ ಗೊತ್ತು. ಸಂವಿಧಾನ ಉಳಿಸಲು ಎರಡನೇ ಸ್ವಾತಂತ್ರ್ಯನ ಹೋರಾಟ ಮಾಡಬೇಕಿದೆ. ಸಂವಿಧಾನ ಉಳಿಸಲು ನಾವು ಎಂತಹ ಹೋರಾಟಕ್ಕೆ ಬೇಕಾದರೂ ತಯಾರಾಗಬೇಕಿದೆ ಎಂದರು. ಬಿಜೆಪಿಗೆ ಮೀಸಲಾತಿ ರದ್ದು ಮಾಡಿದರೆ ರಕ್ತಪಾತ ಆಗುತ್ತದೆ ಎಂದು ಗೊತ್ತಿದೆ. ಬಿಜೆಪಿಯವರದ್ದು ದ್ವೇಷ ಹುಟ್ಟು ಹಾಕುವ ಕೆಲಸ. ಅವರದ್ದು ಸಮಾಜ ಛಿದ್ರ ಮಾಡುವ ಕೆಲಸ ಎಂದು ಕಿಡಿಕಾರಿದ್ದಾರೆ.

ಸಂವಿಧಾನದ ಆಶಯಗಳು ಈಗಲೂ ಈಡೇರಿಲ್ಲ. ಬಿಜೆಪಿಯವರು ಈಗ ಸಂವಿಧಾನದ ಬಗ್ಗೆ ಬಹಳ ಮಾತಾಡುತ್ತಿದ್ದಾರೆ. ಸಂವಿಧಾನವನ್ನು ಸಾವರ್ಕರ್, ಹೆಗ್ಗಡೆವಾರ್ ವಿರೋಧ ಮಾಡಿದ್ದರು. ಭಾರತೀಯತೆಯೇ ಈ ಸಂವಿಧಾನದಲ್ಲಿ ಇಲ್ಲ ಎಂದು ಸಾವರ್ಕರ್ ಟೀಕಿಸಿದ್ದರು.‌ ಕೇಂದ್ರದ ಸಚಿವರೊಬ್ಬರು ಕೆಲ ವರ್ಷಗಳ ಹಿಂದೆ ಸಂವಿಧಾನ ಬದಲಾಯಿಸಲು ನಾವು ಬಂದಿದ್ದೇವೆ ಎಂದು ಹೇಳಿದ್ದರು. ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದರು.

ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂವಿಧಾನ ದಿನಾಚರಣೆ ಈವರೆಗೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಂವಿಧಾನ ದಿನಾಚರಣೆ ಆಚರಿಸುವ ಮೂಲಕ ಸಂವಿಧಾನದ ಮಹತ್ವವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು. ಸಂವಿಧಾನದ ಆಶಯಗಳು ಕೇವಲ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಜನರ ಬದುಕಿನಲ್ಲಿ ಅಳವಡಿಕೆಯಾಗಬೇಕು ಎಂದರು.

ಮುಖ್ಯಮಂತ್ರಿ ಉದ್ಘಾಟನೆ: ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ರಣದೀಪ್‌ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವರಾದ ಕೆ.ಎಚ್. ಮುನಿಯಪ್ಪ, ಡಾ. ಯತೀಂದ್ರ ಸಿದ್ದರಾಮಯ್ಯ, ಪಿ.ಎಂ. ನರೇಂದ್ರಸ್ವಾಮಿ, ಸತೀಶ್ ಜಾರಕಿಹೊಳಿ, ರಿಜ್ವಾನ್ ಅರ್ಷದ್, ಟಿ. ರಘುಮೂರ್ತಿ, ಕೆ.ಎಂ. ಶಿವಲಿಂಗೇಗೌಡ, ಎನ್. ಚಲುವರಾಯಸ್ವಾಮಿ, ಕೆ.ಎಸ್. ಬಸವಂತಪ್ಪ, ಯು.ಟಿ. ಖಾದರ್, ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ತನ್ವೀರ್ ಸೇಠ್, ಎ.ಆರ್. ಕೃಷ್ಣಮೂರ್ತಿ ಸೇರಿದಂತೆ ವಿಧಾನಪರಿಷತ್ ಸದಸ್ಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

Tags:

error: Content is protected !!