ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಡತ ವಿಲೇವಾರಿ ವಿಳಂಬ ಹಾಗೂ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದ್ದು, ಟಿಪಿಒ ಸಂಜಯ್ ಹಿಪ್ಪರಗಿ ಅವರಿಗೆ ಸೇರಿದ ಕಚೇರಿ ಹಾಗೂ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕು ಪಂಚಾಯತ್ ಕಚೇರಿಯ ಇಒ ಸಂಜಯ್ ಹಿಪ್ಪರಗಿ ಅವರ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ ಎಸ್.ಪಿ. ನಂದಗಾವ್ ಅವರ ಸೂಚನೆಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸಾರ್ವಜನಿಕರಿಂದ ಸಲ್ಲಿಕೆಯಾದ ವಿವಿಧ ಕಡತಗಳ ವಿಲೇವಾರಿಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗಿದೆ ಎಂಬ ಗಂಭೀರ ದೂರುಗಳೆ ಈ ದಾಳಿಗೆ ಪ್ರಮುಖ ಕಾರಣವಾಗಿದೆ.
ಸದ್ಯ ಅಧಿಕಾರಿಗಳ ತಂಡವು ಜಮಖಂಡಿಯ ಕಚೇರಿ ಮತ್ತು ನಿವಾಸದಲ್ಲಿ ಲಭ್ಯವಿರುವ ಪ್ರಮುಖ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.
