Belagavi

ನಾಳೆ ಬೆಳಗಾವಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಭೇಟಿ!!!

Share

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಳೆ ಕುಂದಾನಗರಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ರಕ್ಷಣೆ ಮತ್ತು ದೇಶದ ಸುರಕ್ಷತೆ ಕುರಿತು ನಗರದ ಪ್ರಬುದ್ಧ ನಾಗರಿಕರೊಂದಿಗೆ ಫಡ್ನವೀಸ್ ಮಹತ್ವದ ಸಂವಾದ ನಡೆಸಲಿದ್ದಾರೆ.

ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸಂವಾದ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 650 ರಿಂದ 700 ಪ್ರಬುದ್ಧರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಾತಿ, ಧರ್ಮ ಹಾಗೂ ಭಾಷೆಯ ಭೇದಭಾವ ಮರೆತು ಬೆಳಗಾವಿಯ ಜನತೆ ಹಾಗೂ ಪ್ರಬುದ್ಧರು ಹೆಚ್ಚಿನ ಸಂಖ್ಯೆಯಲ್ಲಿ ಧರ್ಮನಾಥ ಭವನಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಳೆ (ನವೆಂಬರ್ 28) ಮಧ್ಯಾಹ್ನ 3:30ಕ್ಕೆ ಬೆಳಗಾವಿಗೆ ಆಗಮಿಸಲಿದ್ದು, ನಗರದ ಧರ್ಮನಾಥ ಭವನದಲ್ಲಿ ಪ್ರಬುದ್ಧ ನಾಗರಿಕರು ಹಾಗೂ ಸಾಮಾಜಿಕ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ‘ಸೇವ್ ಡೆಮಾಕ್ರಸಿ ಫ್ರಮ್ ಅರಾಜಕತೆ’ ಎಂಬ ಶೀರ್ಷಿಕೆಯಡಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂವಾದದಲ್ಲಿ ಮಹಾರಾಷ್ಟ್ರ ಸಿಎಂ ಜೊತೆಗೆ ರಾಜ್ಯ ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಕೂಡ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಬಿ. ಝೀರಲಿ ಮಾಹಿತಿ ನೀಡಿದ್ದಾರೆ.

Tags:

error: Content is protected !!