BALLARI

ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 37 ಕಳವು ಬೈಕ್‌ಗಳ ಸಹಿತ ಖತರ್ನಾಕ್ ಬೈಕ್ ಕಳ್ಳ ಅಂದರ್!

Share

ರಾಜ್ಯದ ವಿವಿಧೆಡೆ ಬೈಕ್ ಕಳ್ಳತನ ನಡೆಸಿ ಜನರ ನಿದ್ದೆಗೆಡಿಸಿದ್ದ ಖತರ್ನಾಕ್ ಖದೀಮನನ್ನು ಬಳ್ಳಾರಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬರೋಬ್ಬರಿ 37 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಳ್ಳಾರಿಯ ರೂಪನಗುಡಿ ನಿವಾಸಿ ಕಾಳಿ ಪ್ರಸಾದ ಅಲಿಯಾಸ್ ಕಾಳಿ (40) ಬಂಧಿತ ಆರೋಪಿಯಾಗಿದ್ದು, ಆಸ್ಪತ್ರೆ, ಬಸ್ ನಿಲ್ದಾಣ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ವಿವಿಧ ಕಂಪನಿಗಳ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬಳ್ಳಾರಿಯ ಗಾಂಧಿನಗರ ಹಾಗೂ ಬ್ರೂಸ್ ಪೇಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು 14.80 ಲಕ್ಷ ರೂಪಾಯಿ ಮೌಲ್ಯದ 37 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Tags:

error: Content is protected !!