Belagavi

ಬೆಳಗಾವಿಯ ರುಕ್ಮಿಣಿ ನಗರದಲ್ಲಿ ₹7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆಸೀಫ್ ಸೇಠ್ ಚಾಲನೆ

Share

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಭರದ ಚಾಲನೆ ದೊರೆತಿದೆ. ನಗರದ ರುಕ್ಮಿಣಿ ನಗರದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಆಸೀಫ್ ಸೇಠ್ ಅವರು ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ಯುವ ನಾಯಕ ಅಮಾನ್ ಸೇಠ್, ಹಿರಿಯ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ನಗರದ ರುಕ್ಮಿಣಿ ನಗರದಲ್ಲಿ ಸುಮಾರು ₹7 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಯೋಜನೆಯಡಿ ಡಾಂಬರೀಕರಣ ರಸ್ತೆ, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಸ್ಥಳೀಯರ ನಾಗರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಗುರಿ ಹೊಂದಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆಸೀಫ್ ಸೇಠ್ ಅವರು, ಬೆಳಗಾವಿ ನಗರದಾದ್ಯಂತ ಪಾಲಿಕೆ ವಿಶೇಷ ಅನುದಾನದಡಿ ₹75 ಕೋಟಿ, ಅಲ್ಪಸಂಖ್ಯಾತರ ಅನುದಾನದಡಿ ₹50 ಕೋಟಿ, ಲೋಕೋಪಯೋಗಿ ಇಲಾಖೆಯಡಿ ₹20 ಕೋಟಿ ಹಾಗೂ ₹450 ಕೋಟಿ ವೆಚ್ಚದ ಫ್ಲೈಓವರ್ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಬಿಮ್ಸ್ ಸಿವಿಲ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಮತ್ತು ತಾಯಿ-ಮಕ್ಕಳ ಆರೈಕೆ ವಿಭಾಗಗಳ ಅಭಿವೃದ್ಧಿಗೆ ₹200 ಕೋಟಿ ಒದಗಿಸಲಾಗಿದ್ದು, ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕಿದ್ವಾಯಿ ಸ್ಮಾರಕದ ಬಳಿ ₹40 ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

Tags:

error: Content is protected !!