ಖಾನಾಪೂರ ತಾಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಅತ್ಯಂತ ಸಂಭ್ರಮದಿಂದ ನೆರವೇರಿತು.

ಶಾಸಕ ವಿಠ್ಠಲ ಹಲಗೇಕರ ಅವರು ನೂತನ ಕಟ್ಟಡದ ಶಂಕು ಸ್ಥಾಪನೆಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು ತದನಂತರದಲ್ಲಿ ಮಾತನಾಡಿದ ಅವರು ಗ್ರಾಮದ ಅಭಿವೃದ್ಧಿ ಹಾಗೂ ಗ್ರಾಮಸ್ಥರಿಗೆ ಉತ್ತಮ ಆಡಳಿತಾತ್ಮಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನಿರ್ಮಿಸಲಾದ ಈ ನೂತನ ಕಟ್ಟಡವು ಗ್ರಾಮದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.

ಈ ಕಟ್ಟಡಕ್ಕಾಗಿ ಜಾಗವನ್ನು ದಾನ ಮಾಡಿದ ಮೋಹನ್ ಸಂಬರಗಿ ಹಾಗೂ ಅವರ ಸಹೋದರರ ಸಾಮಾಜಿಕ ಕೊಡುಗೆ ವಿಶೇಷವಾಗಿ ಶ್ಲಾಘನೀಯವಾಗಿದೆ. ಅವರ ಉದಾರ ಸಹಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸಿದರು

ಈ ಸಂದರ್ಭದಲ್ಲಿ ಹಿರೇಮುನವಳ್ಳಿ ಗ್ರಾಮದ ಗುರು ಹಿರಿಯರು ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
