State

ನಮ್ಮ ಮೆಟ್ರೋ ಪಿಂಕ್ ಲೈನ್, ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪಿಎಂ ಮೋದಿ

Share

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಹಾಗೂ ವಂದೇ ಭಾರತ್ ರೈಲಿಗೆ ವಿದ್ಯುಕ್ತ ಚಾಲನೆ ನೀಡಿದರು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸುಮಾರು 3,470 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ, ತಾವರೆಕೆರೆ ನಿಲ್ದಾಣದಿಂದ ಬಿಳೇಕನಹಳ್ಳಿ ಐಐಎಂಬಿ ನಿಲ್ದಾಣದವರೆಗಿನ ಮೆಟ್ರೋ ಸಂಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು.


ಬಳಿಕ ಐಐಎಂಬಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿಗಳು, ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಮರುಅಭಿವೃದ್ಧಿಪಡಿಸಲಾದ ನಾಲ್ಕು ರೈಲು ನಿಲ್ದಾಣಗಳನ್ನು ಉದ್ಘಾಟಿಸಿ, ನೂತನ ವಂದೇ ಭಾರತ್ ರೈಲಿಗೂ ಹಸಿರು ನಿಶಾನೆ ತೋರಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಮಾರ್ಗದ ರೈಲಿಗೆ ಶುಕ್ರವಾರ ಚಾಲನೆ ನೀಡಿದರು.

ರಾಜ್ಯಪಾಲರಾದ ಡಾ.ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿರುವ ಪಿಂಕ್ ಲೈನ್‌ನ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಯವರಿಗೆ ಮಾರ್ಗ ಮತ್ತು ಸಂಪರ್ಕ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಮಾದರಿಯ ಅನುಷ್ಠಾನದಿಂದ ಆಗುವ ಅನುಕೂಲಗಳು ಹಾಗೂ ಸಂಚಾರ ದಟ್ಟಣೆ ನಿವಾರಣೆ ಬಗ್ಗೆಯೂ ಸಿಎಂ ವಿವರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಸ್ಥಿತರಿದ್ದರು.

Tags:

error: Content is protected !!