State

ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳ ಸಾಥ್: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್!

Share

ರಾಜ್ಯದ ಗ್ರಾಮೀಣ ಹಾಗೂ ಸರ್ಕಾರಿ ಶಾಲೆಗಳ ಚಿತ್ರಣ ಬದಲಾಯಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಶಾಲೆಗಳ ಅಭಿವೃದ್ಧಿಗೆ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಯೋಜನೆಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು.


ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕಾ (Institutional CSR) ಪ್ರತಿನಿಧಿಗಳ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಕರ್ನಾಟಕದ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ರಾಜ್ಯ ಸರ್ಕಾರದ ಜೊತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಕರೆ ನೀಡಿದರು.


ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವುದು ಮತ್ತು ಗ್ರಾಮೀಣ ಭಾಗದ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಹಾಗೂ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಮೇಲಕ್ಕೆತ್ತಲು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಶಾಲಾ ಆಡಳಿತ ಮಂಡಳಿಗಳು ಸ್ವಯಂಪ್ರೇರಿತವಾಗಿ ಮುಂದೆ ಬಂದು ಶಾಲೆಗಳನ್ನು ದತ್ತು ಪಡೆದು ಸಹಕರಿಸಬೇಕು ಎಂದು ಶಿವಕುಮಾರ್ ಅವರು ಮನವಿ ಮಾಡಿದರು.

Tags:

error: Content is protected !!