ವಿಜಯಪುರ ನಗರದ ಮಹಲ್ದಾರ್ ಕಾಲೋನಿಯ ಬಡಾವಣೆಯ ನಿವಾಸಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಇಂದು ಬಡಾವಣೆಯ ನಿವಾಸಿಗಳು ಮುಖ್ಯ ರಸ್ತೆಯನ್ನು ತಡೆದು ಬೃಹತ್ ಪ್ರತಿಭಟನೆ ಮಾಡಿದರು. ಕಳೆದ ಹತ್ತು ದಿನಗಳಿಂದ ಬಡಾವಣೆಯಲ್ಲಿ ಕುಡಿಯುವ ನೀರು ಪೂರೈಕೆ ಆಗದೆ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಸಹ ಇಲ್ಲಿವರೆಗೂ ನೀರು ಪೂರೈಕೆ ಮಾಡಿಲ್ಲ ಎಂದು ಮಹಿಳೆಯರು ರಸ್ತೆಯ ಮೇಲೆ ಖಾಲಿ ಬಿಂದಿಗೆಗಳನ್ನು ಹಿಡಿದು ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದರು. ಕೂಡಲೇ ನೀರು ಪೂರೈಕೆ ಮಾಡಬೇಕು ಅಲ್ಲಿವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

