Belagavi

ಬೆಳಗಾವಿಯಲ್ಲಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯಿಂದ ರಾಜ್ಯೋತ್ಸವ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Share

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸಲಾಯಿತು.

ಭಾನುವಾರ ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಜಿತ ಮನ್ನಿಕೇರಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ರೈತರು ಕೇವಲ ಪ್ರತಿಭಟನೆಗಳಿಗೆ ಸೀಮಿತವಾಗದೆ ಸಂಘಟಿತರಾಗಿ ಬಜೆಟ್‌ನಲ್ಲಿ ತಮಗಿರುವ ಅನುದಾನದ ಬಗ್ಗೆ ಸರ್ಕಾರವನ್ನು ಪ್ರಶ್ನಿಸುವಂತಾಗಬೇಕು ಹಾಗೂ ಪೋಷಕರು ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸುವ ಮೂಲಕ ಮಾತೃಭಾಷಾ ಶಾಲೆಗಳನ್ನು ಉಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ರಾಜ್ಯ ಗೌರವಾಧ್ಯಕ್ಷ ಅರ್ಜುನ ನಾಯಿಕವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹಿರಿಯ ಪತ್ರಕರ್ತರಾದ ಜವಾರಿಕಾಕಾ, ಸದಾನಂದ ಬಾಮಣೆ, ಚಿತ್ರಕಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಅಪ್ಪಾಸಾಹೇಬ ಗಾಣಿಗೇರಿ, ಸಾಹಿತಿ ಡಾ. ವೆಂಕಟೇಶ ಚೌಥಾಯಿ, ಜ್ಯೋತಿಷಿ ಹಾಗೂ ಪಾರಂಪರಿಕ ವೈದ್ಯ ಕೆ.ಆರ್. ಮಂಜುನಾಥ ಆರಾಧ್ಯ, ಚಿಕ್ಕೋಡಿ ಡಯಟ್ ಉಪನ್ಯಾಸಕ ಕೆ.ಟಿ. ಕಾಂಬಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಂಸ್ಥೆಯ ರಾಜ್ಯಾಧ್ಯಕ್ಷ ಲಕ್ಷ್ಮಣ ಮೆಚ್ಚನ್ನವರ, ರಾಜ್ಯ ಉಪಾಧ್ಯಕ್ಷ ವಾಸುದೇವ ರಾರೋಡ, ಶಿಕ್ಷಕ ಮುತ್ತಪ್ಪ ಹುಕ್ಕೇರಿ, ಗಾಯಕಿ ಮಂಜುಳಾ ಮಾಸ್ತಮರಡಿ ಸೇರಿದಂತೆ ಅನೇಕ ಪದಾಧಿಕಾರಿಗಳು ಮತ್ತು ಆಹ್ವಾನಿತರು ಈ ಸಂದರ್ಭದಲ್ಲಿ ಹಾಜರಿದ್ದರು.

Tags:

error: Content is protected !!