Khanapur

ಖಾನಾಪೂರ ತಾಲೂಕಿನಲ್ಲಿ ಮರಳು ಸಾಗಾಣಿಕೆ ಸ್ಥಗಿತ ಖಂಡಿಸಿ ಸೋಮವಾರ ರಸ್ತೆ ತಡೆ!!!

Share

ಖಾನಾಪೂರ ತಾಲೂಕಿನಲ್ಲಿ ಮರಳು ಸಾಗಾಣಿಕೆ ಸ್ಥಗಿತಗೊಂಡಿರುವುದರಿಂದ ವೃತ್ತಿಪರರು ಹಾಗೂ ಕಾರ್ಮಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೋಮವಾರ ಮಹಾಮಾರ್ಗದಲ್ಲಿ ರಾಸ್ತಾರೋಕೊ ನಡೆಸಲು ನಿರ್ಧರಿಸಲಾಗಿದೆ. ಸ್ಥಳೀಯ ಮುಖಂಡರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಖಾನಾಪೂರ ತಾಲೂಕಿನಲ್ಲಿ ಸಾಂಪ್ರದಾಯಿಕ ಮರಳು ವ್ಯವಹಾರ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಇದರಿಂದ ಇಟ್ಟಿಗೆ, ಸೆಂಟ್ರಿಂಗ್ ಹಾಗೂ ಕಟ್ಟಡ ನಿರ್ಮಾಣ ವಲಯದ ನಂಬಿಕೊಂಡಿರುವ ನೂರಾರು ಕುಟುಂಬಗಳಿಗೆ ಉದ್ಯೋಗವಿಲ್ಲದೆ ಉಪವಾಸವಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಇತರೆಡೆ ಮರಳು ಲಭ್ಯವಿದ್ದರೂ ಇಲ್ಲಿ ಮಾತ್ರ ನಿರ್ಬಂಧ ಹೇರಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿರುವ ಮುಖಂಡರು, ಮರಳು ಸಾಗಾಣಿಕೆಯನ್ನು ಕೂಡಲೇ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಆ್ಯಂಡ್‌ ಈಶ್ವರ್ ಘಾಡಿ ಹಾಗೂ ಪ್ರಮುಖರ ಮಾರ್ಗದರ್ಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಟ್ಟಿಗೆ ಮತ್ತು ಮರಳು ವ್ಯವಹಾರವನ್ನು ನೆಚ್ಚಿಕೊಂಡಿರುವ ರೈತರು, ಕಾರ್ಮಿಕರು, ವ್ಯಾಪಾರಸ್ಥರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ನಡೆಯಲಿರುವ ರಾಸ್ತಾರೋಕೊ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ.

Tags:

error: Content is protected !!