Belagavi

ಸುವರ್ಣಸೌಧಕ್ಕೆ ವಿದ್ಯುತ್ ಕಡಿತ ವದಂತಿಗೆ ತೆರೆ; ಬಿಲ್ ಬಾಕಿ ಇಲ್ಲವೆಂದ ಹೆಸ್ಕಾಂ

Share

ಬೆಳಗಾವಿಯ ಸುವರ್ಣ ವಿಧಾನಸೌಧ ಬರೋಬ್ಬರಿ 11 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ ಎಂಬ ಸುದ್ದಿ ಬೆನ್ನಲ್ಲೇ, ಈಗ ಹೆಸ್ಕಾಂ ಅಧಿಕಾರಿಗಳು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಸುವರ್ಣಸೌಧಕ್ಕೆ ಯಾವುದೇ ರೀತಿಯ ವಿದ್ಯುತ್ ಕಡಿತಗೊಳಿಸಿಲ್ಲ ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧ 11 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಹೆಸ್ಕಾಂ, ಪತ್ರಿಕಾ ಪ್ರಕಟಣೆ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದೆ. ಸುವರ್ಣಸೌಧದ ವಿದ್ಯುತ್ ಬಿಲ್ ಅನ್ನು ಕಾಲಕಾಲಕ್ಕೆ ಸರಿಯಾಗಿ ಸಂದಾಯ ಮಾಡಲಾಗುತ್ತಿದ್ದು, ಯಾವುದೇ ಬಾಕಿ ಇಲ್ಲದ ಕಾರಣ ಸೌಧಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹೇಮಂತ್ ಎನ್. ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ವಿದ್ಯುತ್ ಕಡಿತದ ಕುರಿತು ಹರಡಿದ್ದ ಊಹಾಪೋಹಗಳಿಗೆ ಹೆಸ್ಕಾಂ ತೆರೆ ಎಳೆದಿದೆ.

Tags:

error: Content is protected !!