ಖಾನಾಪೂರ ತಾಲೂಕಿನ ಕಸಬಾ ನಂದಗಡ ಗ್ರಾಮದಲ್ಲಿ “ಯಳ್ಕೋಟ್ ಯಳ್ಕೋಟ್ ಜಯ ಮಲ್ಹಾರ್” ನಾಟಕದ ಉದ್ಘಾಟನಾ ಸಮಾರಂಭವು ಸಂಭ್ರಮದಿಂದ ನೆರವೇರಿತು.

ಈ ಉದ್ಘಾಟನಾ ಸಮಾರಂಭದಲ್ಲಿ ಲೈಲಾ ಶುಗರ್ಸ್
ಎಮ್.ಡಿ.ಸದಾನಂದ ಪಾಟೀಲ ಉಪಸ್ಥಿತರಿದ್ದು ಉದ್ಘಾಟನೆ ನೆರವೇರಿಸಿದರು
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ. ಎಚ್. ಪಾಟೀಲ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ , ಕೃಷ್ಣ ಪಾಟೀಲ, ಯಲ್ಲಪ್ಪ ಮಹಾರಾಜರು ಹಾಗೂ ಮಾರುತಿ ಮಹಾರಾಜರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ಶಾಟ್‌ಪುಟ್ (ಗುಂಡು ಎಸೆತ) ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದ ಕುಮಾರಿ ವೈಷ್ಣವಿ ಸಂತೋಷ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಅಲ್ಲದೆ, ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ ತಂಡದ ಸಾಧನೆಯನ್ನು ಶ್ಲಾಘಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸದಾನಂದ ಪಾಟೀಲರು ಗ್ರಾಮದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ವೇದಿಕೆಯಾಗಿದೆ ಎಂದರು
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
