Belagavi

ಬೆಳಗಾವಿ ಉತ್ತರದಲ್ಲಿ ರಸ್ತೆ ಅಭಿವೃದ್ಧಿ ಪರ್ವ: 1 ಕೋಟಿ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ ಚಾಲನೆ

Share

 

ಬೆಳಗಾವಿ ಉತ್ತರ ಮತಕ್ಷೇತ್ರದ ಜನತೆಗೆ ಶಾಸಕ ಆಸಿಫ್ (ರಾಜು) ಸೇಠ್ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಕ್ಷೇತ್ರದ ಬಹುದಿನಗಳ ಬೇಡಿಕೆಯಾಗಿದ್ದ 2.6 ಕಿಲೋಮೀಟರ್ ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಶಾಸಕರು ಅಧಿಕೃತವಾಗಿ ಚಾಲನೆ ನೀಡಿದರು.

ಬೆಳಗಾವಿ ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡಲಾಗಿದ್ದು, ಮುಖ್ಯಮಂತ್ರಿಗಳ ಅಭಿವೃದ್ಧಿ ನಿಧಿಯಡಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ 2.6 ಕಿ.ಮೀ. ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಆಸಿಫ್ (ರಾಜು) ಸೇಠ್ ಚಾಲನೆ ನೀಡಿದರು. ಅಮಾನ್ ಸೇಠ್ ಹಾಗೂ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಿದ ಶಾಸಕರು, ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು. ಈ ಹೊಸ ರಸ್ತೆ ನಿರ್ಮಾಣದಿಂದ ಈ ಭಾಗದ ರಸ್ತೆ ಸಂಪರ್ಕ ಸುಧಾರಿಸುವುದರ ಜೊತೆಗೆ ವಾಹನ ಸಂಚಾರ ಸುಗಮವಾಗಲಿದೆ.

ಇದೇ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಶಾಸಕ ಆಸಿಫ್ ಸೇಠ್, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೂಲಸೌಕರ್ಯಗಳು ಅತ್ಯಗತ್ಯ ಎಂದು ತಿಳಿಸಿದರು. ನಾಗರಿಕರ ಅಗತ್ಯಗಳಿಗೆ ತಕ್ಕಂತೆ ಕ್ಷೇತ್ರದ ವಿವಿಧೆಡೆ ನಿರಂತರವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಬಹುದಿನಗಳ ರಸ್ತೆ ಸಮಸ್ಯೆಗೆ ಮುಕ್ತಿ ಸಿಗುತ್ತಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿ, ಶಾಸಕರ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು

Tags:

error: Content is protected !!