ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ನವೆಂಬರ್ 19ರಂದು ಗುರುವಾರ ವಿಜಯಪುರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀ ಸದ್ಗುರು ಭೀಮಾಶಂಕರ ಸ್ವಾಮಿ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ಸದ್ಗುರು ದತ್ತಪ್ಪಯ್ಯ ಸ್ವಾಮಿಗಳು ತಿಳಿಸಿದರು. ವಿಜಯಪುರ ನಗರದ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿ ಸ್ಥಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದ್ಗುರುಗಳ ವಿಜಯಪುರ ಭೇಟಿಯ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು. ಜಗದ್ಗುರುಗಳ ಆಗಮನದ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬ್ರಾಹ್ಮಣ ಸಮಾಜದ ಮುಖಂಡರಾದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿರುವರು
ಪೀಠಾಧೀಶರು, ಸದ್ಗುರು ಭೀಮಾಶಂಕರ ಮಠ ದತ್ತಪ್ಪಯ್ಯ ಸ್ವಾಮಿಜಿ, ಕೃಷ್ಣಭಟ್ ಗಲಗಲಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾಯಿತ ಪ್ರತಿನಿಧಿ ಸತೀಶಚಂದ್ರ ಕುಲಕರ್ಣಿ, ಅರುಣ ಸೊಲ್ಲಾಪುರಕರ, ಪ್ರಕಾಶ ಅಕ್ಕಲಕೋಟ, ಅಪ್ಪಣ್ಣ ಗಾಯಿ, ವಿಜಯ ಜೋಶಿ, ವಿಕಾಸ ಪದಕಿ, ವಲ್ಲಭ ಮನಗೂಳಿ, ರಾಕೇಶ ಕುಲಕರ್ಣಿ, ಅಚ್ಯುತ್ ಜೋಶಿ ಉಪಸ್ಥಿತರಿದ್ದರು.
