ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಸವರಾಜೇಂದ್ರ ನಗರದಲ್ಲಿ ರಾತ್ರಿ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ಸಮಯದಲ್ಲಿ ಮನೆಗಳ ಸುತ್ತಮುತ್ತ ಸಂಚರಿಸುತ್ತಿರುವ ವ್ಯಕ್ತಿ, ಮನೆಗಳ ಕಿಟಕಿಗಳಲ್ಲಿ ಕೈ ಹಾಕಿ ಸಿಕ್ಕ ವಸ್ತುಗಳನ್ನು ಕದಿಯಲು ಯತ್ನಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಈತನ ಅನುಮಾನಾಸ್ಪದ ಚಲನವಲನಗಳು ಸ್ಥಳೀಯರ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.
ಸಿಸಿಟಿವಿ ದೃಶ್ಯದಲ್ಲಿರುವ ವ್ಯಕ್ತಿಯನ್ನು ಯಾರಾದರೂ ಗುರುತಿಸಿದ್ದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ, ರಾತ್ರಿ ವೇಳೆ ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಪ್ಲೋ…
