ಕಿತ್ತೂರು ಕ್ಷೇತ್ರದ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಅವರ ಪರಿಶ್ರಮ ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಸೌಲಭ್ಯವಿಲ್ಲ ಎಂದು ಬಿಜೆಪಿ ವಿರೋಧ ಪಕ್ಷದ ನಾಯಕರು ಟೀಕೆ ಮಾಡುತ್ತಿದ್ದಾರೆ. ಆದರೆ ಈ ಎಲ್ಲಾ ಟೀಕೆಗಳ ನಡುವೆಯೂ ಕಿತ್ತೂರು ಕ್ಷೇತ್ರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ತರುವ ಮೂಲಕ ಶಾಸಕ ಬಾಬಾಸಾಹೇಬ್ ಪಾಟೀಲ್ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದ್ದಾರೆ.

ಇದಕ್ಕೆ ಸಾಕ್ಷಿ ಎಂಬಂತೆ ಕಿತ್ತೂರು ಕ್ಷೇತ್ರದ ಹೊಸ ಕಾದರವಳ್ಳಿ ಗ್ರಾಮದಲ್ಲಿ ಬರೋಬ್ಬರಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮದ ಪ್ರತಿಯೊಂದು ಗಲ್ಲಿಗೂ ಉತ್ತಮ ಸಿಸಿ ರಸ್ತೆ ನಿರ್ಮಿಸುವ ಉದ್ದೇಶದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಸಕ
**ಬಾಬಾಸಾಹೇಬ್ ಪಾಟೀಲ್ ಅವರು
“ವಿರೋಧ ಪಕ್ಷದ ನಾಯಕರು ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡಲಿ, ನಾವು ನಮ್ಮ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ. ಸರ್ಕಾರದ ಖಜಾನೆ ಖಾಲಿಯಾಗಿಲ್ಲ.

ನಮ್ಮ ಕ್ಷೇತ್ರಕ್ಕೆ ಬರಬೇಕಾದ ಅನುದಾನ ಬರುತ್ತಿದೆ. ಯಾವುದೇ ಅನುದಾನದ ಕೊರತೆ ನಮ್ಮ ಕ್ಷೇತ್ರಕ್ಕೆ ಇಲ್ಲ. ಪ್ರತಿಯೊಂದು ಗ್ರಾಮಕ್ಕೂ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದ್ದೇನೆ. ನಮ್ಮ ಕ್ಷೇತ್ರದ ಯಾವುದೇ ಗ್ರಾಮಕ್ಕೂ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದೇನೆ.
ಟೀಕೆ ಮಾಡುವವರು ಮಾಡುತ್ತಿರಲಿ, ನಾವು ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸೋಣ.

ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಈಗಾಗಲೇ ಮೀಸಲಾತಿ ಪ್ರಕಟವಾಗಿದೆ. ನಮ್ಮ ಕ್ಷೇತ್ರದಲ್ಲಿ ಕೆಲವು ಕಡೆ ಮೀಸಲಾತಿ ವಿಚಾರದಲ್ಲಿ ಸಮಸ್ಯೆಗಳಿವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ. ಉಳಿದಂತೆ ಎಲ್ಲವನ್ನೂ ಚುನಾವಣಾ ಆಯೋಗ ನೋಡಿಕೊಳ್ಳುತ್ತದೆ.

ಮುಂಬರುವ ಅಧಿವೇಶನದಲ್ಲಿ ಯಾವುದೇ ಶಾಸಕರಿಗೂ ತಾರತಮ್ಯ ಮಾಡುವುದಿಲ್ಲ. ಎಲ್ಲರೂ ನಮ್ಮವರೇ ಎಂಬ ಭಾವನೆಯಿಂದ ನಡೆದುಕೊಳ್ಳುತ್ತೇವೆ. ಎಂದಿದ್ದಾರೆ.
*ವರದಿಗಾರ:*
ಶಾನೂಲ ಮತ್ತೆಖಾನ, ಕಿತ್ತೂರು
