DEATH

ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲು

Share

ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದ ಬಳಿ ನಡೆದಿದೆ.

ಕುರುಗೋಡು ತಾಲೂಕಿನ ಎಚ್. ವೀರಾಪುರ ಗ್ರಾಮದ ನಿವಾಸಿಗಳಾದ ಸತೀಶ್ (16) ಮತ್ತು ಫಕ್ಕೀರಪ್ಪ (12) ಮೃತ ದುರ್ದೈವಿಗಳು. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದ ಈ ಇಬ್ಬರು ಬಾಲಕರು, ವಾಪಸ್ ಬರುವಾಗ ಬುಕ್ಕಸಾಗರದಲ್ಲಿರುವ ತಮ್ಮ ಅಜ್ಜಿಯ ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಗ್ರಾಮದ ಬಳಿಯಿರುವ ಕಾಲುವೆಯಲ್ಲಿ ಈಜಾಡಲು ತೆರಳಿದಾಗ, ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳೀಯರು ಕಾರ್ಯಾಚರಣೆ ನಡೆಸಿ ಇಬ್ಬರೂ ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

error: Content is protected !!