ತಾಲೂಕಿನ ಕೆರೂರ್ ಕ್ರಾಸ್ ಬಳಿಯ ಗ್ಯಾಸ್ ಕಚೇರಿ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ವಿಳಾಸ ಈವರೆಗೆ ತಿಳಿದುಬಂದಿಲ್ಲ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಂಕಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೃತರ ವಾರಸುದಾರರು ಅಥವಾ ಮಾಹಿತಿ ಇರುವವರು ಕೂಡಲೇ ಅಂಕಲಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.
