ಬೆಳಗಾವಿ ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರ ಕಾರ್ಮಿಕರೊಂದಿಗೆ ವಿಶ್ವ ಹಿಂದೂ ಪರಿಷತ್ ವತಿಯಿಂದ ಅರ್ಥಪೂರ್ಣವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ನಗರದ ವಿವಿಧ ವಾರ್ಡ್ಗಳ ಪೌರ ಕಾರ್ಮಿಕರಿಗೆ ಸಿಹಿ ಹಂಚುವ ಮೂಲಕ ಅವರ ಸೇವೆಯನ್ನು ಗೌರವಿಸಲಾಯಿತು.

ಬೆಳಗಾವಿ ನಗರದ ವಾರ್ಡ್ ನಂಬರ್ 17, 25, 33 ಮತ್ತು 34ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಸ್ವೀಟ್ ಬಾಕ್ಸ್ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ದೇಶದ ಗಡಿಯಲ್ಲಿ ಕಾಯುವ ಯೋಧರು ಮತ್ತು ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಸೇವೆ ಅತ್ಯಂತ ಅನನ್ಯವಾದದ್ದು ಎಂದು ಶ್ಲಾಘಿಸಿದರು.
ನಗರದ ನೈರ್ಮಲ್ಯಕ್ಕಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಅಗತ್ಯವಿರುವ ಆರೋಗ್ಯ ಶಿಬಿರಗಳು ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗಳಿಗೆ ಬೇಕಾದ ಎಲ್ಲಾ ರೀತಿಯ ನೆರವನ್ನು ನೀಡಲು ವಿಶ್ವ ಹಿಂದೂ ಪರಿಷತ್ ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಕದಮ್, ಪ್ರವೀಣ್ ಪಾಟೀಲ್, ಡಾ. ಭಾಕೋಜಿ, ಹೇಮಂತ್ ಹಾವಳ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ತಿನ ಅನೇಕ ಸದಸ್ಯರು ಉಪಸ್ಥಿತರಿದ್ದರು.
