State

ವಿಷನ್ ಕರ್ನಾಟಕ 2033: ನವ ಕರ್ನಾಟಕ ನಿರ್ಮಾಣಕ್ಕೆ ಯುವಜನರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ!

Share

ನವ ಕರ್ನಾಟಕದ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಭವಿಷ್ಯದ ನೀಲನಕ್ಷೆ ರೂಪಿಸಲು ನ್ಯೂಸ್ ಫಸ್ಟ್ ಕನ್ನಡ ವಾಹಿನಿಯು ವಿಶೇಷ ವೇದಿಕೆಯನ್ನು ಕಲ್ಪಿಸಿಕೊಟ್ಟಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನ್ಯೂಸ್ ಫಸ್ಟ್ ಕನ್ನಡ ಸುದ್ದಿವಾಹಿನಿಯು ಶುಕ್ರವಾರ ಹಮ್ಮಿಕೊಂಡಿದ್ದ ‘ವಿಷನ್ ಕರ್ನಾಟಕ 2033 – ನವ ಕರ್ನಾಟಕಕ್ಕೆ ಯುವ ಚಿಂತನೆ’ ವಿಶೇಷ ಯುವ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಶಕದಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಮುನ್ನೋಟ, ಯುವಜನರ ನಿರೀಕ್ಷೆಗಳು ಹಾಗೂ ರಾಜ್ಯದ ಪ್ರಗತಿಯಲ್ಲಿ ಯುವಶಕ್ತಿಯ ಪಾತ್ರದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರಲ್ಲದೆ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

Tags:

error: Content is protected !!