ನಾಡಿನ ನೆಲ, ಜಲ, ಭಾಷೆಯ ರಕ್ಷಣೆಗಾಗಿ ನಿರಂತರ ಹೋರಾಟ ನಡೆಸುವುದರ ಜೊತೆಗೆ ಸಮಾಜದ ಸುಧಾರಣೆ, ಜನಕಲ್ಯಾಣ ಹಾಗೂ ದಮನಿತರು, ಶೋಷಿತರು ಮತ್ತು ಹಿಂದುಳಿದವರ ಏಳಿಗೆಗಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮಹೇಶ ಕುಮಾರ್ ಪ್ರತಿಪಾದಿಸಿದರು.
ಬೆಳಗಾವಿ ನಗರದಲ್ಲಿ ಇಂದು ನಡೆದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ಸಂಘಟನಾತ್ಮಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನೂತನ ಘಟಕಗಳನ್ನು ರಚಿಸುವುದು ಹಾಗೂ ಸಂಘಟನೆಯನ್ನು ತಳಮಟ್ಟದಿಂದ ವಿಸ್ತರಿಸುವ ಕುರಿತು ಪದಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸುಧೀರ ಕಾಂಬಳೆ, ಮಹಿಳಾ ಘಟಕದ ಅಧ್ಯಕ್ಷೆ ಸ್ಮೀತಾ ಪೂಜಾರ, ಉಪಾಧ್ಯಕ್ಷೆ ಗೀತಾ ಜಿನಬಸಪ್ಪನವರ, ಜಿಲ್ಲಾ ಖಜಾಂಚಿ ನಿತೀನ ಚೌಗಲೆ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಹಾಗೂ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.
