BALLARI

ಖಾಸಗಿ ಬಸ್ ಡಿಕ್ಕಿಯಾಗಿ ತುಂಡಾದ ಯುವಕನ ಕಾಲು!!!

Share

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬನ ಕಾಲು ತುಂಡಾದ ದಾರುಣ ಘಟನೆ ಬಳ್ಳಾರಿ ಮತ್ತು ಕಂಪ್ಲಿ ನಡುವಿನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬಳ್ಳಾರಿ-ಕಂಪ್ಲಿ ರಾಜ್ಯ ಹೆದ್ದಾರಿಯ ದೇವಸಮುದ್ರ ಗ್ರಾಮದ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನ ಕಾಲು ತುಂಡಾಗಿದೆ. ಕಂಪ್ಲಿ ನಿವಾಸಿ ಹಾಗೂ ಜಿಂದಾಲ್ ಕಂಪನಿಯ ಉದ್ಯೋಗಿಯಾಗಿರುವ ರಾಘವೇಂದ್ರ (30) ಗಂಭೀರವಾಗಿ ಗಾಯಗೊಂಡ ದುರ್ದೈವಿಯಾಗಿದ್ದಾರೆ. ಕಂಪ್ಲಿ ಕಡೆಗೆ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳು ರಾಘವೇಂದ್ರ ಅವರನ್ನು ತಕ್ಷಣವೇ ಬಳ್ಳಾರಿಯ ಟ್ರಾಮಾಕೇರ್ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!