ಬೆಳಗಾವಿ ತಾಲೂಕಿನ ಅಷ್ಟೇ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಶುಕ್ರವಾರ ಅಷ್ಟೇ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕ್ಸಾಬ್ ಬಾಬಾಸಾಬ ಮುಲ್ಲಾ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಕೃಷ್ಣಾ ಅಷ್ಟೇಕರ್ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಕಾಂಗ್ರೆಸ್ ಮುಖಂಡ ಅರವಿಂದ ಕಾರ್ಚಿ ಮಾತನಾಡಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವವರು ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದು. ಗ್ರಾಮದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.