Uncategorized

ಅಥಣಿ ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳು

Share

ಅಥಣಿಯಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಮುಂದುವರಿದಿದೆ. ಅಥಣಿ ಪಟ್ಟಣದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಬಂದ ಘಟನೆ ನಡೆದಿದೆ.

ಅಥಣಿ ಪಟ್ಟಣದ ಕೆ.ಎ.ಲೋಕಾಪುರ ಪದವಿ ಮಹಾವಿದ್ಯಾಲಯದ ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬಂದಿದ್ದರು. ನಿನ್ನೆ ಹಿಜಾಬ ಧರಿಸಿಕೊಂಡು ಕಾಲೇಜು ಮುಂದೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಹಿನ್ನೆಲೆ ಇಂದು ಹಿಜಾಬ್ ವಿರುದ್ಧವಾಗಿ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಬಂದಿದ್ದರು. ನಿನ್ನೆ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿನಿಯರು ಇಂದು ಗೈರು. ಕಾಲೇಜು ಆವರಣವರೆಗೆ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕೊಂಡು ಬಂದರು. ಈ ವೇಳೆ ಆ ವಿದ್ಯಾರ್ಥಿಗಳನ್ನು ಕಾಲೇಜು ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ತಡೆ ಹಿಡಿದರು. ಇದರಿಂದ ಸಿಬ್ಬಂದಿ ಜೊತೆಗೆ ವಿದ್ಯಾರ್ಥಿಗಳು ವಾಗ್ವಾದ ಮಾಡಿದರು.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೆÇಲೀಸರು ದೌಡಾಯಿಸಿದದರು. ಅಥಣಿ ಡಿವೈಎಸ್ಪಿ ಎಸ್.ವಿ.ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಡಳಿತ ಮಂಡಳಿ ಜೊತೆ ಅಧಿಕಾರಿಗಳ ಸಭೆ ನಡೆಸಿ ವಿದ್ಯಾರ್ಥಿಗಳನ್ನು ಮನವಲಿಸಲು ಪ್ರಯತ್ನಿಸಿದರು. ಇನ್ನು ಮುಂಜಾಗ್ರತಾ ಕ್ರಮವಾಗಿ ಕೆ.ಎ.ಲೋಕಾಪುರ ಕಾಲೇಜು ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Tags:

error: Content is protected !!