ವಿಜಯಾ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳು ಮುಸ್ಲಿಂ ಮಕ್ಕಳ ಪಾಲಕೊಂದಿಗೆ ನಮಡೆಸಿದ ಸಭೆ ವಿಫಲವಾಗಿದೆ. ಜಿಲ್ಲಾಧಿಕಾರಿಗಳು ನ್ಯಯಾಲಯದ ಆದೇಶ ಪಾಲಿಸುವಂತೆ ಪಾಲಕರಿಗೆ ತಿಳಿ ಹೇಳಿದರೆ, ಪಾಲಕರು ಕನಿಷ್ಟ ನಮ್ಮ ಮಕ್ಕಳಿಗೆ ದುಪ್ಪಟಾ ಹಾಕಿಕೊಂಡು ಕುಳಿಯುಕೊಳ್ಳಲು ಅವಕಾಶ ನೀಡಿ ಎಂದಿದ್ದಾರೆ.

ಬೆಳಗಾವಿಯ ಸದಾಶಿವ ನಗರದಲ್ಲಿನ ವಿಜಯಾ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಹಿನ್ನೆಲೆಯಲ್ಲಿ ದೊಡ್ಡ ವಿವಾದವೇ ಸೃಷ್ಠಿಯಾಗಿತ್ತು. ಇನ್ನು ನಿನ್ನೆ ಹಾಗೂ ಇಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟುಹಿಡಿದು ಕಲೇಜು ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಾಲೇಜಿಗೆ ಭೇಟಿ ನೀಡಿ ಪಾಲಕರ ಸಭೆ ನಡೆಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದ್ದರು. ಹಾಗಾಗಿ ಜಿಲ್ಲಾಧಿಕಾರಿಗಳು ಇಂದು ಸಾಯಂಕಾಲ ಜಿಲ್ಲಾಧಿಕಾರಗಳು ತಮ್ಮ ಕಛೇರಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಪಾಲಕರ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ನಿಮ್ಮ ಮಕ್ಕಳಿಗೆ ತಿಳಿ ಹೇಳಿ. ನ್ಯಾಯಾಲಯದ ಮಧ್ಯಮತರ ಆದೇಶವನ್ನು ಪಾಲಿಸುವಂತೆ ತಿಳಿ ಹೇಳಿ ಎಂದು ಪಾಲಕರಿಗೆ ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಪಾಲಕರು ನಮ್ಮ ಮಕ್ಕಳಿಗೆ ಕನಿಷ್ಟ ಪಕ್ಷ ತಲೆಯ ಮೇಲೆ ದುಪ್ಪಟ್ಟಾ ಹಾಕಿಕೊಳ್ಳಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಈ ವೇಳೆ ನಮ್ಮ ಇನ್ ನ್ಯೂಸ್‍ನೊಂದಗೆ ಮಾತನಾಡಿದ ವಿದ್ಯಾರ್ಥಿಗಳ ಪಾಲಕರು, ನಮ್ಮ ಅಭಿಪ್ರ್ರಾಯವನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಹಾಗೂ ನಮ್ಮ ಮಕ್ಕಳಿಗೆ ಕನಿಷ್ಟ ದುಪ್ಪಟ್ಟಾ ಹಾಕಿಕೊಂಡು ಬರಲು ಅವಕಾಶ ನೀಡುವಂತೆ ಕೇಳಿದ್ದೇವೆ ಎಂದರು.
ಇನ್ನು ಇದೇ ವೇಳೆ ಮಾತನಾಡಿದ ಪಾಲಕರ ಪರ ವಕೀಲರು, ಹಿಜಾಬ್ ವಿಚಾರದಲ್ಲಿ ಕಾಲೇಜಿನವರು ಸ್ವತಃ ನ್ಯಾಯಾಲಯದ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ನಮ್ಮ ಹಿರಿಯ ವಕೀಲರು ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ವಿನಾಕಾರಣ ನಮಗೆ ತೊಂದರೆ ನೀಡುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ತೀವೃತೆಯ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳು ಮುಸ್ಲಿ ವಿದ್ಯಾರ್ಥಿಗಳ ಪಾಲಕರ ಮನವೊಲಿಸಲು ಮಾಡಿದ ಪ್ರಯತ್ನ ವಿಫಲವಾಗಿದೆ. ಇನ್ನು ಜಿಲ್ಲಾಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸುವಂತೆ ಪಾಲಕರಿಗೆ ತಿಳಿ ಹೇಳಿದ್ದಾರೆ. ಇನ್ನು ನ್ಯಾಯಾಲಯದ ಅಂತಿಮ ಆದೇಶ ಬಂದ ನಂತರವಷ್ಟೇ ಇದಕ್ಕೆ ಸ್ಪಷ್ಟ ನಿರ್ಧಾರ ತಿಳಿಯಲಿದೆ.
