ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಕನ್ನಡದ ಜನತೆ, ನೆಲ, ಭಾಷೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದು, ರಾಜ್ಯಕ್ಕೆ ಅವರ ಆಗಮನದಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲವೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಾಳೆ ಕುಂದಾನಗರಿ ಬೆಳಗಾವಿಗೆ ರಾಹುಲ್ ಗಾಂಧಿ ಆಗಮನ ಹಿನ್ನಲೆಯಲ್ಲಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲೆ ಚುನಾವಣೆ ನಡೆದರೂ ಕೂಡಾ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಹೋಗುತ್ತಾರೆ. ಅವರು ಹೋದಲೆಲ್ಲಾ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದು ನಮಗೆ ಗೊತ್ತಿದೆ ಎಂದರು.
ಗುಜರಾತ್ ಚುನಾವಣಾ ಸಂದರ್ಭದಲ್ಲಿ ರಾಗಾ ಭಾರತ ಜೋಡೋ ಮಾಡಿದ್ದರು. ಆದರೇ ಅವರ ಭಾರತ ಜೋಡೋ ದೇಶದಲ್ಲಿ ಯಾವುದೇ ರೀತಿಯಾಗಿ ಮತವಾಗಿ ಪರಿವರ್ತನೆಯಾಗುವುದಕ್ಕೆ ಯಶಸ್ವಿಯಾಗಿಲ್ಲ. ಅದಕ್ಕೆ ಪುರಾವೆ ಎಂಬಂತೆ ಗುಜರಾತ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಸರ್ಕಾರ ರಚನೆ ಮಾಡಿದ್ದೇವೆ ಎಂದರು.
