ರಾಜ್ಯದಲ್ಲಿ 2023-24 ರ ಹೊಸ ಶೈಕ್ಷಣಿಕ ವರ್ಷವು ನಾಳೆ ಮೇ 31 ರಿಂದ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಹೊಸ ಶೈಕ್ಷಣಿಕ ವರ್ಷ ನಾಳೆಯಿಂದ ಪ್ರಾರಂಭವಾಗುತ್ತದೆ. ಅದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ. ವಿದ್ಯಾರ್ಥಿಗಳು ಉತ್ತಮ ಮತ್ತು ಆರೋಗ್ಯಕರ ವಾತಾವರಣದಲ್ಲಿ ಅಧ್ಯಯನ ಮಾಡಬೇಕೆಂದು ನಾವು ಬಯಸುತ್ತೇವೆ.
ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು, ಪೋಷಕರು ಹಾಗೂ ಕನ್ನಡಿಗರ ಸಹಕಾರ ಅಗತ್ಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಈ ಬಗ್ಗೆ ಫೇಸ್ಬುಕ್ ಫೋಸ್ಟ್ ಹಾಕುವ ಮೂಲಕ ವಿಧ್ಯಾರ್ಥಿಗಳಿಗೆ ಶುಭಾಷಯ ತಿಳಿಸಿದ್ದಾರೆ.
ಇನ್ನು ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ.