ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ಅನಗೋಳ ನಿವಾಸಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ತಿಳಿದುಬಂದಿದೆ. ಈ ಅಪಘಾತ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರು ಬೆಳಗಾವಿ ಅನಗೋಳ ನಿವಾಸಿ ಶಂಶುದ್ದೀನ್
(40), ಮಲ್ಲಿಕಾ (37), ಖಲೀಲ್ (42) ಮತ್ತು ತಬ್ರೇಜ್ (13) ಎಂದು ಗುರುತಿಸಲಾಗಿದೆ ಗಂಭೀರವಾಗಿ ಗಾಯಗೊಂಡಿದ್ದ ನರ್ಗೀಸ್, ರೆಹಾನ್, ರೆಹಮಾನ್‌ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.
