ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ಕ್ಕೆ ನಡೆದಿದೆ. ಮೆಟ್ರೋ ಹಳಿಗೆ ಹಾರಿದ್ದ ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ, ಮೆಜೆಸ್ಟಿಕ್ ನಿಲ್ದಾಣದಿಂದ ವೈಟ್ ಫೀಲ್ಡ್ ನಡುವೆ ಮೆಟ್ರೋ ಸಂಚಾರ ಮಾಡುತ್ತದೆ. ಘಟನೆ ನಂತರ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ರೈಲು ನಿಂತಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ-ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತದಿಂದ ಪ್ರಯಾಣಿಕರು ಪರದಾಡಿದ್ದಾರೆ.
