ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳೇ ಆಗಿತ್ತು. ಅವರ ಜನ್ಮದಿನದಂದು ಭೇಟಿ ಮಾಡಿದ್ದು ಬಿಟ್ಟರೇ ಇವತ್ತೇ ನೋಡುತ್ತಿರುವುದು. ಎಂದು ನಟ ವಿನೋದ್ ಪ್ರಭಾಕರ್ ಹೇಳಿದ್ದಾರೆ .
ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ರನ್ನು ನೋಡಲು ಇಂದು ಕನ್ನಡ ಚಿತ್ರರಂಗದ ಹಿರಿಯ ನಟ ಟೈಗರ್ ಪ್ರಭಾಕರ್ ಅವರ ಪುತ್ರ ವಿನೋದ್ ಪ್ರಭಾಕರ್ ಆಗಮಿಸಿದ್ದು, ದರ್ಶನ್ ಕಂಡು, ಕೆಲ ಸಮಯ ಮಾತನಾಡಿಸಿದ್ದರು .
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿನೋದ್ ಪ್ರಭಾಕರ್ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ.
ಭಗವಂತ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ತುಂಬಲಿ. ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳೇ ಆಗಿತ್ತು. ಅವರ ಜನ್ಮದಿನದಂದು ಭೇಟಿ ಮಾಡಿದ್ದು ಬಿಟ್ಟರೇ ಇವತ್ತೇ ನೋಡುತ್ತಿರುವುದು. ಮಾಧ್ಯಮಗಳಲ್ಲಿ ಸುದ್ದಿ ಬರುವುದನ್ನು ನೋಡಿ ಈ ವಿಚಾರ ತಿಳಿದುಕೊಂಡೆ. ಪೊಲೀಸ್ ಸ್ಟೇಷನ್ಗೆ ಹೋಗಿ ಭೇಟಿಯಾಗಲು ಪ್ರಯತ್ನ ಮಾಡಿದೆ ಎಂದು ಹೇಳಿದ್ದರು.
ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿಯಾದೆ. ದರ್ಶನ್ ಅವರು ಮೌನವಾಗಿಯೇ ಇದ್ದರು. ನಾನು ಹೋದಾಗ, ‘ಏನ್ ಟೈಗರ್ ಅಂತ ಹೇಳಿದ್ರು’ ಅಷ್ಟೇ ಮಾತನಾಡಿದ್ದು. ಅವರಿಗೆ ಶೆಕ್ ಹ್ಯಾಂಡ್ ಮಾಡಿ, ಅಲ್ಲಿಂದ ಹೊರಬಂದೆ. ಕಾನೂನಿಗಿಂತ ಯಾರು ದೊಡ್ಡವರಿಲ್ಲ, ಎಲ್ಲರಿಗೂ ನ್ಯಾಯ ಸಿಗಲಿ. ನನಗೆ ದೇವರ ಮೇಲೆ ಅಪಾರವಾದ ನಂಬಿಕೆಯಿದೆ. ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಕಳೆದಿವೆ. ನಾನು ನನ್ನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೆ. ರೇಣುಕಸ್ವಾಮಿ ಫ್ಯಾಮಿಲಿ ಒಂದು ಕಡೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಇತ್ತ ದರ್ಶನ್ ಕುಟುಂಬದ ಜತೆಗೆ ಅಭಿಮಾನಿಗಳು ಸಹ ನೋವಿನಲ್ಲಿದ್ದಾರೆ. ಯಾರಿಗೆ ಸಾಂತ್ವನ ಹೇಳಬೇಕು ಅಂತ ತಿಳಿಯಲಿಲ್ಲ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಾಗಿ ಮಾತನಾಡಲು ಆಗ್ತಿಲ್ಲ ಎಂದು ಹೇಳಿದ್ದರು .
ಇನ್ನು ನಟ ದರ್ಶನ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಪುತ್ರ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ, ದರ್ಶನ್ ಅವರನ್ನು ಭೇಟಿಯಾಗಿದ್ದಾರೆ.ದರ್ಶನ್ ಭೇಟಿ ಮಾಡಿ, ವಾಪಸಾದ ಅವರು, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ .