Gokak

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಏನೂ ತಪ್ಪಿಲ್ಲ ; ಸಿದ್ದರಾಮಯ್ಯ ಪರ ಲಖನ್ ಜಾರಕಿಹೊಳಿ ಬ್ಯಾಟಿಂಗ್

Share

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಸಂಗವೆ ವಿಲ್ಲ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ವೆಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದ್ದರು ಗೋಕಾಕ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಖನ್ ಜಾರಕಿಹೊಳಿ ಸಿದ್ದರಾಮಯ್ಯ ನಾಯಕತ್ವದಲ್ಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂದಿನ ಹತ್ತು ವರ್ಷ ಸಿದ್ದರಾಮಯ್ಯ ಸಿಎಂ, ಅವರ ಬದಲಾವಣೆ ಇಲ್ಲ ಎಂದು ಲಖನ್ ಹೇಳಿದರು.

ಸತೀಶ್ ಜಾರಕಿಹೊಳಿ ಸಧ್ಯ ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ಇನ್ನೂ 10 ವರ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇರಲಿದೆ. ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ಸಿಕ್ಕರೆ ಸಿಗಬಹುದು ಎಂದು ಸಹೋದರ ಲಖನ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ 136 ಸದಸ್ಯ ಬಲದ ಕಾಂಗ್ರೆಸ್ ಸರ್ಕಾರ ಸುಭದ್ರ ಆಡಳಿತ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಆಗಿದ್ದು ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಲಖನ್ ಜಾರಕಿಹೊಳಿ ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಯಾವಾಗಲೂ ನಮ್ಮ ನಾಯಕರು ಅವರ ಮೇಲೆ ಆರೋಪ ಮಾಡುವ ವಿರೋಧಿಗಳಿಗೆ ತಕ್ಕ ಉತ್ತರ ಕೊಡುತ್ತಾರೆ ,ಬಿಜೆಪಿ ಶಾಸಕ ಯತ್ನಾಳ ಆರೋಪದ ಬಗ್ಗೆ ನನಗೆ ಗೊತ್ತಿಯಿಲ್ಲ ನಾನೂ ಪಕ್ಷೇತರ ಎಂದು ಹೇಳಿದ್ದರು .

Tags:

error: Content is protected !!