DAM

ತುಂಗಭದ್ರಾ ಜಲಾಶಯ ಅವಘಡ | ಹೆಕ್ಟರ್ ಗೆ 50 ಸಾವಿರ ಪರಿಹಾರ ನೀಡಿ : ವಿಜಯೇಂದ್ರ

Share

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ 50 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.5

ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿ ನೀರು ಪೋಲಾಗುತ್ತಿರುವುದರಿಂದ ಇಂದು ಬಸವರಾಜ ಬೊಮ್ಮಾಯಿ, ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಟಿಬಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬಿ. ವೈ. ವಿಜಯೇಂದ್ರ ಜಲಾಶಯದಲ್ಲಿ ಆದ ಲೋಪದ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು. ರೈತರಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆಯಿಂದ ಕಳೆದ ವರ್ಷ ಬರಗಾಲ ಕಾಡಿತ್ತು. ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ತುಂಬಿದ್ದರೂ ಆ ನೀರು ಉಳಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈಗ ತನ್ನ ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಯಾವ ಅಧಿಕಾರಿಗಳನ್ನು ಟೀಕಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಯಾರನ್ನೂ ಟೀಕಿಸದೇ ಹೊಣೆಗಾರಿಕೆಯನ್ನು ಇಲಾಖೆಯ ಸಚಿವರೇ ಹೊತ್ತುಕೊಳ್ಳಬೇಕು ಎಂದು ಹೇಳಿದ್ದರು .

Tags:

error: Content is protected !!