ಗ್ಯಾರಂಟಿಗಳಿಂದ ರಾಜ್ಯದ ಜನರ ಮನೆ ಮನ ಮುಟ್ಟುತ್ತಿವೆ. ರಾಜ್ಯದ ಜನತೆ ಯಾವತ್ತೂ ಸಿದ್ದರಾಮಯ್ಯ ಜೊತೆ ಇದ್ದಾರೆ ಎಂದು ಶಾಸಕ ಅಶೋಕ ಪಟ್ಟಣ ಹೇಳಿದ್ದರು . ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅಶೋಕ ಪಟ್ಟಣ ಮುಡಾ ಹಗರಣದಲ್ಲಿ ಬಿಜೆಪಿಯವರು ಸಿಎಂ ಸಿದ್ದರಾಮಯ್ಯನವರ ವರ್ಚಸ್ಸನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ.

ಜನಪರ ಯೋಜನೆಗಳು, ಗ್ಯಾರಂಟಿಗಳಿಂದ ರಾಜ್ಯದ ಜನರ ಮನೆ ಮನ ಮುಟ್ಟುತ್ತಿವೆ. ರಾಜ್ಯದ ಜನತೆ ಯಾವತ್ತೂ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಪರವಾಗಿ ಇದ್ದು, ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಸಹಿಸಲಾರದೇ ಮಾಡುತ್ತಿರುವ ಕುತಂತ್ರ ಎಂದಿಗೂ ಫಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು .
