ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 9,644 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿ ಬಳಿಯ ನವಿಲು ತೀರ್ಥ ಜಲಾಶಯದಿಂದ 9,644 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸವದತ್ತಿ ಹಾಗೂ ರಾಮದುರ್ಗ ತಾಲೂಕಿನಲ್ಲಿ ಗ್ರಾಮಗಳಲ್ಲಿ ಪ್ರವಾಹದ ಅತಂಕ ಎದುರಾಗಿದ್ದು , ನದಿ ತೀರಕ್ಕೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ .