ಸಿಎಂ ಸಿದ್ದರಾಮಯ್ಯ ಅವರು ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಎನ್ ಡಿ ಎ ನಾಯಕರ ವಿರುದ್ಧದ ಪ್ರಕರಣಗಳ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಪೂರ್ವಾನುಮತಿ ಕೊಟ್ಟಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಹೆಚ್ಚಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಪ್ರಕರಣದಂತೆಯೇ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಹೋರಾಟಕ್ಕೆ ಇಳಿದಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆಯವರ ಮೇಲಿನ ಪ್ರಕರಣದಲ್ಲೂ ಪ್ರಾಸಿಕ್ಯೂಷನ್ ಅನುಮತಿಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದೆ.ವಿಧಾನಸೌಧ ಗಾಂಧಿ ಪ್ರತಿಮೆಯ ಮುಂಭಾಗ ಕಾಂಗ್ರೆಸ್ ನಾಯಕರು ಪ್ರತಿಭಟನೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಕೈ ನಾಯಕರು ಎನ್ ಡಿಎ ನಾಯಕರ ಮೇಲೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದಂತೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಕೇಸಿನಲ್ಲಿ ಅರ್ಜಿ ಕೊಟ್ಟ ತಕ್ಷಣ ಶೋಕಾಸ್ ನೋಟಿಸ್ ಕೊಟ್ಟು ಅನುಮತಿ ಕೊಟ್ಟಿದ್ದಾರೆ. ಆದ್ರೆ ಅದಿನ್ನೂ ತನಿಖೆ ಆಗಿಲ್ಲ. ಆದರೆ ಉಳಿದ ಕೇಸಿನಲ್ಲಿ ಭಾಗಿಯಾಗಿರೋ ಬಗ್ಗೆ ತನಿಖೆಯಾಗಿದೆ. ಗವರ್ನರ್ ಆಫೀಸ್ ರಾಜಕೀಯ ಕಚೇರಿ ಆಗಬಾರದು ಎಂದು ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಪಾಲರ ಪೀಠ ನ್ಯಾಯಾಲಯದ ಪೀಠ ಇದ್ದ ಹಾಗಿರಬೇಕು. 136 ಜನರನ್ನು ರಾಜ್ಯದ ಜನರು ಆಯ್ಕೆ ಮಾಡಿದ್ದಾರೆ . ಆದರೂ ಸರ್ಕಾರವನ್ನು ಅಸ್ಥಿರಗೊಳಿಸು ಪ್ರಯತ್ನ ಮಾಡಲಾಗ್ತಿದೆ. ಕರ್ನಾಟಕ ದೊಡ್ಡ ರಾಜ್ಯ. ಇದನ್ನ ಅಸ್ಥಿರಗೊಳಿಸುವ ಪ್ರಯತ್ನ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಬೇರೆ ಅರ್ಜಿ ನೋಡಿದ ಹಾಗೇ ಸಮಾನತೆಯಿಂದ ಈ ಅರ್ಜಿಗಳನ್ನು ನೋಡಿ ಎಂದಿದ್ದೇವೆ. ಕಾನೂನು ಉಳಿಸಲು ಮನವಿಯನ್ನು ಮಾಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ನುಡಿದರು.
ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ. ಅವರಿಗೆ ಬೇರೆ ಯಾವುದೇ ಆಯ್ಕೆಯಿಲ್ಲ ಎಂದು ಡಿಕೆಶಿ ಹೇಳಿದರು.