Dharwad

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್

Share

ಧಾರವಾಡ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಒಂದು ರಸ್ತೆ ಪಕ್ಕಕ್ಕೆ ಜಾರಿರುವ ಘಟನೆ ನವಲಗುಂದ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಬ್ಯಾಹಟ್ಟಿ ಕುಸುಗಲ್ ಮಧ್ಯೆ ಸಂಚರಿಸುವ ಸಾರಿಗೆ ಸಂಸ್ಥೆಯ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದೆ. ಈ ಬಸ್ಸಿನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Tags:

error: Content is protected !!