ತನಗೆ ಕಚ್ಚಿದ ಹಾವಿನ ತಲೆ ಜಜ್ಜಿ ಹಾವಿನೊಂದಿಗೆ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ
ತಂದೆ ಮಗ ಇಬ್ಬರು ಶೇಂಗಾ ಕೀಳಲು ಹೋಗಿದ್ದ ವೇಳೆ ಘಟನೆ ನಡೆದಿದೆ. ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕನಿಗೆ ಹಾವು ಕಚ್ಚಿದ್ದು, ಕೂಡಲೇ ಹಾವಿನ ತಲೆ ಜಜ್ಜಿ ಕೊಂದಿದ್ದ ಫಕ್ಕೀರಪ್ಪ. ತಂದೆ ಈರಪ್ಪನ ಜೊತೆ ಆಸ್ಪತ್ರೆಗೆ ಬಂದಿದ್ದಾನೆ. ವೈದ್ಯರಿಗೆ ಹಾವನ್ನ ತೋರಿಸಿ, ಇದೆ ಹಾವು ಕಚ್ಚಿದೆ ಎಂದ ಫಕ್ಕೀರಪ್ಪ, ನಂತರ ಯುವಕನನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ.