hubbali

ಹಿಂದೂ ವಿರೋಧಿ ನೀತಿಯಿಂದಾಗಿ ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಪತ್ತೆ : ಪ್ರಲ್ಹಾದ್ ಜೋಶಿ

Share

ಹಿಂದಿನ ಆಂಧ್ರಪ್ರದೇಶ ಸರ್ಕಾರ ಹಿಂದೂ ವಿರೋಧಿ ನೀತಿಯಿಂದಾಗಿ ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಹಾಗೂ ಇತ್ಯಾದಿ ವಸ್ತುಗಳು ಪತ್ತೆಯಾಗಿರುವುದನ್ನು ಲ್ಯಾಬ್ ವರದಿ ವಿವರಿಸಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ಈ ತರಹದ ವಸ್ತುಗಳನ್ನು ಖರೀದಿ ಮಾಡಿ ಲಡ್ಡು ತಯಾರಿಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕೂಡ ಹೇಳಿದ್ದರಲ್ಲಿ ಸತ್ಯವಿದೆ ಹೀಗಾಗಿ ಇದರಲ್ಲಿ ತಪ್ಪು ಮಾಡಿದವರಿಗೆ ಕಠಿಣ ಶಿಕ್ಷಣ ಆಗಬೇಕು ಎಂದ ಅವರು ನುಡಿದರು.
ಪ್ರಸಾದ ವಿತರಣೆಯಲ್ಲಿ ಆಯಾ ಸರ್ಕಾರಗಳು ಮೂಗು ತೊರಿಸದೆ ದೇವಸ್ಥಾನ ಆಡಳಿತ ಮಂಡಳಿಯವರು ನಿರ್ಧಾರ ಮಾಡಬೇಕು ಮತ್ತು ಪರಿಶೀಲನೆ ಮಾಡಬೇಕು. ದೇಶದ ನಂಬಿಕೆ, ಸಂಸ್ಕೃತಿ, ಶ್ರದ್ಧೆ ಹಾಳು ಮಾಡಬಾರದು ಎಂದರು.

ಮುನಿರತ್ನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಮೇಲೆ ಆರೋಪಗಳಿವೆ. ಸರಿಯಾಗಿ ತನಿಖೆ ಮಾಡಬೇಕು. ಯಾರೇ ತಪ್ಪು ಮಾಡಿದ್ದರೂ ಸಹ ಶಿಕ್ಷೆಯಾಗಲಿ. ಆದರೆ 2020 ರ ಪ್ರಕರಣ ಈಗ ಮುನ್ನೆಲೆಗೆ ಬಂದಿದ್ದು ಏಕೆ? ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗಳಿಗೆ ನಾವು ಹೆದರೋಲ್ಲ ಎಂದರು. ಗಣೇಶನ ಮೆರವಣಿಗೆ ಮಾಡಿದವರ ಮೇಲೆ ಎಫ್.ಐ.ಆರ್ ಹಾಕಲಾಗುತ್ತಿದೆ. ನೋಡಲು ಹೋದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಆರ್.ಅಶೋಕ ಅವರ ಮೇಲೂ ಎಫ್.ಐ.ಆರ್ ದಾಖಲಾಗಿದೆ. ಮಸೀದಿ ಬಂದರೆ ಗಣೇಶ ಹಾಡು ಬಂದ್ ಮಾಡಬೇಕಂತೆ, ಹಾಗಾದರೆ ಗಣೇಶ ಹೋದರೆ ಮುಸ್ಲಿಂರು ನಮಾಜ್ ಬಂದ್ ಮಾಡುತ್ತಾರೆಯೇ? ಎಂದ ಅವರು ಈ ಮೂಲಕ ರಾಜ್ಯ ಸರ್ಕಾರ ತುಷ್ಟಿಕರಣ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

ಹುಬ್ಬಳ್ಳಿ ಮಂಟೂರ ರಸ್ತೆಯ ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟಿನ್ ವಿಚಾರವಾಗಿ ಉತ್ತರಿಸಿದ ಅವರು, ಸ್ಮಶಾನ ಭೂಮಿ ಆಗಿದ್ದರೆ ಇಂದಿರಾ ಕ್ಯಾಂಟಿನ್ ಬೇರೆ ಕಡೆ ಮಾಡಬೇಕು. ಸೌಹಾರ್ದತೆಯಿಂದ ಶಾಸಕರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಬಗೆಹರಿಸಬೇಕು ಎಂದರು.

Tags:

error: Content is protected !!