ಮುಡಾ ಹಗರಣದಲ್ಲಿ ಹೈ ಕೊರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಗೆ ಹಿನ್ನಡೆಯಾದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಯಿತು. ಮುಡಾ ಪ್ರಕರಣ ಹಿನ್ನಲೆ ರಾಜೀನಾಮೆ ನೀಡಿ ತನಿಖೆ ಎದುರಿಸಿ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿ ತಕ್ಷಣವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ನಗರ ಮೊರ್ಚಾ ಮಂಡಲ ಅಧ್ಯಕ್ಷ ಶಂಕರ ಹೂಗಾರ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.