ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದೂವರಿ ವರ್ಷ ಪೂರ್ಣಗೊಳಿಸಿರುವ ಕಾಂಗ್ರೆಸ್ ಸರ್ಕಾರ ಮಾಡಿರುವ ಅಭಿವೃದ್ಧಿ ಶೂನ್ಯ ಎಂದು ಮಾಜಿ ಶಾಸಕ ಪಿ ರಾಜೀವ್ ಟೀಕಿಸಿದರು.
ಕುಡಚಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಪಿ ರಾಜೀವ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಮಾಡುವಲ್ಲಿ ಸರ್ಕಾರ ವಿಫಲವಾಗಿದೆ’ ಕೈ ಶಾಸಕರು ತಲೆ ಎತ್ತಿ ಹಳ್ಳಿಗಳಲ್ಲಿ ಓಡಾಡುವ ಸ್ಥಿತಿಯಲ್ಲಿ ಇಲ್ಲಾ, ಸರ್ಕಾರದಲ್ಲಿ ದಲಿತರಿಗೆ ರೈತರಿಗೆ ಬಹಳ ಅನ್ಯಾಯವಾಗುತ್ತಿದೆ , ಸಾರಿಗೆ ಇಲಾಖೆ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದೆ ,ಗೃಹ ಲಕ್ಷ್ಮೀ ಹಣ ಪ್ರತಿ ತಿಂಗಳು ಗೃಹಿಣಿಯರಿಗೆ ಬರುತ್ತೀಲ್ಲ ವೆಂದು ಆಕ್ರೋಶ ವ್ಯಕ್ತಪಡಿಸಿದರು .
ಇನ್ನೂ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಕ್ಷೇತ್ರದಲ್ಲಿ ಹಂಚಿಕೆಯಾಗಿದೆ , ಬಳ್ಳಾರಿ ಸಂಸದ ತುಕರಾಮ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ , ಬಳ್ಳಾರಿ ಸಂಸದರು ಸದಸ್ಯತ್ವವನ್ನ ಚುನಾವಣಾ ಆಯೋಗ ರದ್ದು ಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.