Belagavi

ವಡಗಾಂವ ಮಂಗಾಯಿ ನಗರ ಕೆರೆಯಲ್ಲಿ ಅಪರಿಚಿತ ಶವ ಪತ್ತೆ!!!

Share

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಳಗಾವಿಯ ವಡಗಾಂವ ಮಂಗಾಯಿ ನಗರದಲ್ಲಿ ನಡೆದಿದೆ.

ಬೆಳಗಾವಿಯ ವಡಗಾಂವ ಮಂಗಾಯಿ ನಗರದಲ್ಲಿರುವ ಕೆರೆಯಲ್ಲಿ ಇಂದು ಬೆಳಿಗ್ಗೆ ಓರ್ವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಶವವನ್ನು ಹೊರಗೆ ತೆಗೆದಿದ್ದಾರೆ. ಕಳೆದ ಎರಡ್ಮೂರು ದಿನಗಳ ಹಿಂದೆಯೇ ಈ ವ್ಯಕ್ತಿ ನೀರಿಗೆ ಬಿದ್ದಿರ ಬಹುದೆಂದು ಪೊಲೀಸರು ಮೂಲಗಳಿಂದ ಮಾಹಿತಿ ದೊರೆತಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:

error: Content is protected !!